ಮೂಡುಬಿದಿರೆಯಲ್ಲಿ ರೈ ವಿರುದ್ಧ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ

ಮೂಡುಬಿದಿರೆ : “ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕಾಪಾಡಬೇಕಾದ ಹೊಣೆಗಾರಿಕೆ ಇರುವ ಸಚಿವರೇ ಗಲಭೆಗೆ ಪ್ರಚೋಧನೆ ನೀಡುತ್ತಿದ್ದಾರೆ. ಕಾಂಗ್ರೆಸ್ಸಿನ ಶವ ಪೆಟ್ಟಿಗೆಗೆ ರಮಾನಾಥ ರೈ ಕೊನೆಯ ಮೊಳೆ ಹೊಡೆಯುತ್ತಿದ್ದಾರೆ” ಎಂದು ವಿಶ್ವ ಹಿಂದೂ ಪರಿಷತ್ (ವಿಹಿಂಪ) ತಾಲೂಕಾಧ್ಯಕ್ಷ ಶ್ಯಾಮ ಹೆಗ್ಡೆ ಆರೋಪಿಸಿದರು.

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ರಮನಾಥ ರೈ ವಿರುದ್ಧ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಜೆ ವಿಹಿಂಪ-ಜರಂಗದಳ ನಡೆಸಿದ ಜಂಟಿ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೆ ಆರ್ ಪಂಡಿತ್ ಮಾತನಾಡಿ, “ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಬಂಧಿಸಲು ಸಾಧ್ಯವಿಲ್ಲ, ಅಂತಹ ದುಸ್ಸಹಾಸಕ್ಕೆ ಕೈ ಹಾಕಿದ್ದಲ್ಲಿ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.