ವೈಜ್ಞಾನಿಕ ತ್ಯಾಜ್ಯ ವಿಲೇ ಆಗ್ರಹಿಸಿ ಪರಿಸರ ಸಮಿತಿ ಪ್ರತಿಭಟನೆ

ಪರಿಸರ ಸಮಿತಿಯಿಂದ ನಡೆದ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಪರಿಸರ ಸ್ವಚ್ಛತೆ ಹಾಗೂ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಒತ್ತಾಯಿಸಿ ಕಾಸರಗೋಡು ಜಿಲ್ಲಾ ಪರಿಸರ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ಲಾಸ್ಟಿಕ್ ಹಾಗೂ ಇಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಉರಿಸುವುದು, ಮಣ್ಣಿನಡಿಯಲ್ಲಿ ಹುಗಿಯುವುದು ಮೊದಲಾದ ಅವೈಜ್ಞಾನಿಕ ವಿಲೇವಾರಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕು, ಪರಿಸರ ಹಾಗೂ ನಗರಸಭಾ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗಳನ್ನು ಕೊನೆಗಾಣಿಸಬೇಕು ಮೊದಲಾದ ಘೋಷಣೆಗಳು ಪ್ರತಿಭಟನೆಯಲ್ಲಿ ಕೇಳಿಬಂತು.

ಕಾಸರಗೋಡು ಹೊಸ ಬಸ್ ನಿಲ್ದಾಣದ ಮರದಡಿಯಲ್ಲಿ ನಡೆದ ಪ್ರತಿಭಟನೆಯನ್ನು ಪಿ ಪಿ ಕೆ ಪೆÇದುವಾಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ತ್ಯಾಜ್ಯಗಳು ದಿನದಿಂದ ದಿನಕ್ಕೆ ವರ್ಧಿಸುತ್ತಿದೆ. ಅದನ್ನು ತಡೆಯಲು ಸಾಧ್ಯವಿಲ್ಲ. ಆದರೆ ವೈಜ್ಞಾನಿಕ ರೀತಿಯಲ್ಲಿ ಅದನ್ನು ವಿಲೇವಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕಾಗಿದೆ. ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳು ಪರಿಸರವನ್ನು ರಕ್ಷಿಸಬೇಕಾಗಿದೆ” ಎಂದು ಹೇಳಿದರು.

ಹಲವಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.