ಅಡ್ಡಾದಿಡ್ಡಿ ಬೈಕ್ ಚಲಾಯಿಸಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಪಾನಮತ್ತನಾಗಿ ಅಡ್ಡಾದಿಡ್ಡಿ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರ ಮತ್ತು ಹಿಂಬದಿ ಸವಾರರನ್ನು ಸಾರ್ವಜನಿಕರೇ ಹಿಡಿದು ಚೆನ್ನಾಗಿ ಥಳಿಸಿದ ಘಟನೆ ಕಂಕನಾಡಿ ಕರಾವಳಿ ವೃತ್ತದ ಬಳಿ ನಡೆದಿದೆ.

ಇಲ್ಲಿನ ಫಾದರ್ ಮುಲ್ಲರ್ ಆಸ್ಪತ್ರೆ ಮುಂಭಾಗದಲ್ಲಿರುವ ವೃತ್ತದ ಬಳಿ ಕಂಠಪೂರ್ತಿ ಕುಡಿದುಕೊಂಡಿದ್ದ ಇಬ್ಬರು ಯುವಕರು ಅಡ್ಡಾದಿಡ್ಡಿ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಹಲವು ಮಂದಿ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದು, ಬಳಿಕ ಎಲ್ಲರೂ ಸೇರಿ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಸವಾರ ಮತ್ತು ಸಹಸವಾರರನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.