`ಗೊಂಬೆಯಾಟ ನಮ್ಮ ಸಂಸ್ಕøತಿಯ ಪ್ರತೀಕ’

ಭಟ್ಕಳ : “ಗೊಂಬೆಯಾಟವು ನಮ್ಮ ಸಂಸ್ಕøತಿಯ ಪ್ರತೀಕವಾಗಿದ್ದು, ಅದನ್ನು ಉಳಿಸುವುದರ ಜೊತೆಗೆ ಸಂಸ್ಕಾರ ಮತ್ತು ಸಂಪ್ರದಾಯದ ಬೆಳವಣಿಗೆಯನ್ನು ಪ್ರಮುಖ ಉದ್ದೇಶವನ್ನಾಗಿಟ್ಟುಕೊಂಡು ಕುಮಟಾದಿಂದ ಕಾಸರಗೋಡಿನತನಕ ಆಯ್ದ 22 ಶಾಲೆಗಳಿಗೆ ಪ್ರವಾಸ ಮಾಡಿ ಈ ಕಲೆಯನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಿದ್ದೇವೆ” ಎಂದು ಭಾಸ್ಕರ ಕಾಮತ ಹೇಳಿದರು.

ಅವರು ಮಂಗಳವಾರ ಭಟ್ಕಳದ ನ್ಯೂ ಇಂಗ್ಲಿಷ್ ಪಿ ಯು ಕಾಲೇಜಿನಲ್ಲಿ ಉಪ್ಪಿನಕುದ್ರು ದೇವಣ್ಣ ಪದ್ಮನಾಭ ಕಾಮತ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಇದರ 22ನೇ ವರ್ಷದ ಸಂಭ್ರಮಾಚರಣೆಯಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಮತ್ತು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಅವರ ಪ್ರಾಯೋಜಕತ್ವದಲ್ಲಿ ಶಾಲೆಯಡೆಗೆ ಗೊಂಬೆ ನಡಿಗೆ ಎನ್ನುವ ಕಾರ್ಯಕ್ರಮದಲ್ಲಿ ಗೊಂಬೆಯಾಟದ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು. ವಿವಿಧ ಗೊಂಬೆಗಳ ಪ್ರಾತ್ಯಕ್ಷಿಕೆಯನ್ನು ವಿವಿಧ ಹಾವ-ಭಾವದ ಮೂಲಕ ಅಭಿವ್ಯಕ್ತಿಪಡಿಸಿ ವಿದ್ಯಾರ್ಥಿಗಳ ಪ್ರಶಂಸೆಗೆ ಪಾತ್ರರಾದರು.