ಕಾಂಗ್ರೆಸ್ ಶಾಸಕಿಯ ಹಿಂದೂ ರಾಷ್ಟ್ರದ ಹೇಳಿಕೆ ಬಗ್ಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ

ನಮ್ಮ ಪ್ರತಿನಿಧಿ ವರದಿ

ಪುತ್ತೂರು : ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರು ಈಶ್ವರಮಂಗಲದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರದ ವಿಚಾರದಲ್ಲಿ ಮಾತನಾಡಿದ್ದು, ಇದು ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮಿ ಈಶ್ವರಮಂಗಲ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದ ಕಾರ್ಯಕ್ರಮದಲ್ಲಿ ಶಾಸಕಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ, “ಎಲ್ಲೆಡೆ ಧರ್ಮ ಜಾಗೃತಿಯಾದರೆ ಭಾರತ ಹಿಂದೂ ರಾಷ್ಟ್ರವಾಗಬಹುದು” ಎಂದು ಹೇಳಿದ್ದರು.

ಇವರ ಹೇಳಿಕೆ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವೂ ಆಗಿದೆ.

ಜಾತ್ಯತೀತ ಪಕ್ಷ ಕಾಂಗ್ರೆಸ್ ಶಾಸಕಿಯಾಗಿದ್ದುಕೊಂಡು ಹಿಂದೂ ರಾಷ್ಟ್ರದ ಕಲ್ಪನೆಯನ್ನು ಇಟ್ಟುಕೊಂಡಿರುವುದು ಯಾವ ಕಾರಣಕ್ಕೆ ಮತ್ತು ಈ ವಿಚಾರದಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟನೆ ನೀಡಬೇಕಾಗುತ್ತದೆ ಎಂದು ಕೆಲವರು ಸಾಮಾಜಿಕ ತಾಣವಾದ ಫೇಸ್ಬುಕ್ ಮತ್ತು ವಾಟ್ಸಪ್ಪಿನಲ್ಲಿ ಆಗ್ರಹಿಸಿದ್ದಾರೆ.

ಶಾಸಕಿ ಕುರಿತು ಈಗಾಗಲೇ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞÂ ಕೆಲ ದಿನಗಳ ಹಿಂದೆ ಹೇಳಿಕೆಯೊಂದನ್ನು ನೀಡಿದ್ದು, “ಶಾಸಕಿ ಯಾವ ಪಕ್ಷದಲ್ಲಿದ್ದಾರೆ” ಎಂಬುದನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದ್ದರು. ಈ ನಡುವೆ ಶಾಸಕಿಯ ಹೇಳಿಕೆ ಕಾರ್ಯಕರ್ತರಲ್ಲಿ ಮತ್ತಷ್ಟು ಸಂಶಯಕ್ಕೆ ಕಾರಣವಾಗಿದೆ.