ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ…

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಸಂಪನ್ನಗೊಂಡಿತು. ನಿನ್ನೆ ಮುಂಜಾನೆ ವೀರಂಮಂಗಲ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನ ವಿಧಿ ನಡೆಯಿತು. ಈ ವೇಳೆ ಸಾವಿರಾರು ಭಕ್ತರು ಉಪಸ್ಥಿತರಿದ್ದರು. 8 ದಿನಗಳ ಕಾಲ ನಡೆದ ಜಾತ್ರೋತ್ಸವದಲ್ಲಿ ಸುಮಾರು 10 ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.