ಎಡಿಜಿಪಿ ಜತೆ ರೈ ಭೇಟಿ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ ಹೆಚ್ಚಲು ಸಂಘ ಪರಿವಾರವೇ ಮುಖ್ಯ ಕಾರಣ ಎಂದು ಕಂಡುಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಬೆಂಗಳೂರಿನಲ್ಲಿ ಎಡಿಜಿಪಿ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಕರೋಪಾಡಿ ಗ್ರಾ ಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆ ಹಾಗೂ ಕಲ್ಲಡ್ಕ ಘರ್ಷಣೆ ಸೇರಿದಂತೆ ಜಿಲ್ಲೆಯ ವಿವಿಧ ಕೋಮು ಆಧರಿತ ಘಟನೆಗಳ ಬಗ್ಗೆ ಸಚಿವ ರೈ ಪೊಲೀಸ್ ಮಹಾ ನಿರ್ದೇಶಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೀಎಂ ಸಿದ್ದರಾಮಯ್ಯ ಅವರಿಗೂ ಮನವರಿಕೆ ಮಾಡಿಕೊಟ್ಟಿರುವ ಸಚಿವ ರೈ ಅತ್ಯುಗ್ರ ಕ್ರಮಕ್ಕಾಗಿ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ.