ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಮಳೆ ಮತ್ತೆ ಬಿರುಸಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 20ರವರೆಗೂ ಉತ್ತಮವಾಗಿ ಮಳೆ ಸುರಿಯಲಿದ್ದು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಒಂದೆರಡು ದಿನಗಳ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.

ಇದಕ್ಕೆ ಪೂರಕವೆಂಬಂದತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದಲೇ ತೀವ್ರ ಮಳೆಯಾಗುತ್ತಿದೆ. ಶನಿವಾರ ಇಡೀ ದಿನ ಮಳೆ ಸುರಿದಿದೆ. ಪಕ್ಕದ ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುತ್ತಿರುವ ಮಾಹಿತಿ ಲಭ್ಯವಾಗಿದೆ.