ಆತ್ಯಾಚಾರ ಪ್ರಕರಣ ಆರೋಪಿ ಖುಲಾಸೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮೂಡುಬಿದಿರೆ : ಸಮೀಪದ ಪಡುಮಾರ್ನಡು ಗ್ರಾಮದಲ್ಲಿ ಎರಡು ವರ್ಷದ ಹಿಂದೆ ನಡೆದ ಯುವತಿಯೋರ್ವಳ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ದ ಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.

ಪಡುಮಾರ್ನಾಡಿನ ಕೃಷಿಕ ದಯಾನಂದ ಎಂಬವರು 2014 ಅಕ್ಟೋಬರ್ 10ರಂದು ನೆರೆಮನೆಯ ಯುವತಿಯೋರ್ವಳನ್ನು ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಆರೋಪಿ ವಿರುದ್ಧ ಪೆÇಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಕೆಲ ತಿಂಗಳ ಬಳಿಕ ಆರೋಪಿಗೆ ಕೋರ್ಟ್ ಜಾಮೀನು ನೀಡಿತ್ತು. ಆದರೆ ವಿಚಾರಣೆ ಮುಂದುವರಿದಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಧೀಶರು ಇತ್ತೀಚೆಗೆ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.