ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಶಿರಸಿ : ತಾಲೂಕಿನ ಬಿಸಲಕೊಪ್ಪದಲ್ಲಿ 3 ವರ್ಷದ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ, 10,000 ರೂ ದಂಡ ವಿಧಿಸಿದೆ.

ಶಿರಸಿಯ ಬಿಸಲಕೊಪ್ಪದ ಹಸನ ಉಮರಾಲಿಯು 2014 ಫೆಬ್ರುವರಿ 2ರಂದು ತಮ್ಮ ಮನೆಗೆ ಗೇರುಬೀಜ ಕೆಲಸಕ್ಕೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಜೀವ ಬೆದರಿಕೆ ಹಾಕಿದ್ದ. ಹಸನ ಮೇಲೆ ಪೋಕ್ಸೋ ಪ್ರಕರಣ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು. ಶಿರಸಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದರು. ಇದೀಗ ಜಿಲ್ಲಾ ನ್ಯಾಯಾಧೀಶ ವಿ ಎಸ್ ಧಾರವಾಡಕರ ಅವರು ಈ ಪ್ರಕರಣದ ವಿಚಾರಣೆ ನಡೆಸಿ, ಜೀವಾವಧಿ ಶಿಕ್ಷೆ, 10,000 ರೂ ದಂಡ ವಿಧಿಸಿದ್ದಾರೆ.