ವೈದ್ಯಕೀಯ ಅರ್ಹತಾ ಪರೀಕ್ಷೆ : ಕನ್ನಡ ಬಾಷೆಗೆ ಸ್ಥಾನಮಾನ ನೀಡಲು ಒತ್ತಾಯ

ಕರ್ನಾಟಕ ಮಕ್ಕಳ ಪಕ್ಷದ ವಿದ್ಯಾರ್ಥಿ ಘಟಕ ಮನವಿ ನೀಡುತ್ತಿರುವುದು

ನಮ್ಮ ಪ್ರತಿನಿಧಿ ವರದಿ

ಮುಲ್ಕಿ : ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕನ್ನಡ ಬಾಷೆಗೆ ಅವಕಾಶ ನೀಡಬೇಕೆಂದು ಕರ್ನಾಟಕ ಮಕ್ಕಳ ಪಕ್ಷದ ವಿದ್ಯಾರ್ಥಿ ಘಟಕ ಅಧಿಕಾರಿ ಮೂಲಕ ಮುಖ್ಯಮಂತ್ರಿಯನ್ನು ಆಗ್ರಹಿಸಿದೆ.

2017ನೇ ಸಾಲಿನ ರಾಷ್ಟ್ರೀಯ ವೈದ್ಯಕೀಯ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಭಾರತೀಯ 8 ಬಾಷೆಗಳಲ್ಲಿ ಪರೀಕ್ಷೆ ಬರೆಯಲು ಕೇಂದ್ರ ಸರಕಾರ ಅವಕಾಶ ಕಲ್ಪಿಸಿದ್ದು, ಭಾರತೀಯ ಪ್ರಾಚೀನ ಬಾಷೆಗಳಲ್ಲಿ ಒಂದಾಗಿರುವ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದರಿಂದ ಕನ್ನಡ ಬಾಷೆ ಹಾಗೂ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ ಎಂದು ಕರ್ನಾಟಕ ಮಕ್ಕಳ ಪಕ್ಷದ ವಿದ್ಯಾರ್ಥಿ ಘಟಕದ ಉಪಾಧ್ಯಕ್ಷ ಆರೋಪಿಸಿದ್ದಾರೆ.