ಪ್ರತಾಪ ಸಿಂಹಗೆ ರೆಡ್ಡಿ ಎಚ್ಚರಿಕೆ

ಬೆಂಗಳೂರು : ಐತಿಹಾಸಿಕ ವ್ಯಕ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಸಿದ್ದಾರೆ. “ಒನಕೆ ಓಬವ್ವ ಮತ್ತು ಕಿತ್ತೂರು ಚೆನ್ನಮ್ಮರ ವಿರುದ್ಧ ಸಿಂಹ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಬರೆದಿದ್ದಾರೆ. ಸಿಂಹ ವಿರುದ್ಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ” ಎಂದು ರೆಡ್ಡಿ ತಿಳಿಸಿದರು.