ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ರಿಕ್ಷಾ

ನಮ್ಮ ಪ್ರತಿನಿಧಿ ವರದಿ

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಉಕ್ಕುಡ ಎಂಬಲ್ಲಿ ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದು ಜಖಂಗೊಂಡಿದ್ದು, ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡಿದ್ದಾರೆ.

ವಿಟ್ಲದಿಂದ ಅಳಿಕೆಯತ್ತ ಸಂಚರಿಸುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಉಕ್ಕುಡ ಕಿರುಸೇತುವೆಯಿಂದ ಕೆಳಕ್ಕೆ ಸುಮಾರು ಇಪ್ಪತ್ತು ಅಡಿ ಆಳಕ್ಕೆ ಬಿದ್ದಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅಳಿಕೆ ಗ್ರಾಮದ ಎರುಂಬು ನಿವಾಸಿ ಪರಮೇಶ್ವರ ಪೂಜಾರಿ ಮತ್ತು ಪ್ರಯಾಣಿಕ ನಾರಾಯಣ ಶೆಟ್ಟಿ ಗಾಯಗೊಂಡಿದ್ದಾರೆ. ಗಾಯಾಳುಗಳು ವಿಟ್ಲದ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.