ಟ್ಯಾಂಕರ್ ಬೈಕಿಗೆ ಡಿಕ್ಕಿ, ಸವಾರರಿಬ್ಬರು ಗಂಭೀರ

ನಮ್ಮ ಪ್ರತಿನಿಧಿ ವರದಿ

ವಿಟ್ಲ : ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ  ಗ್ಯಾಸ್ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರವಾಗಿ ಗಾಯಗೊಂqರು.

12vittla4

ಮಂಗಳೂರು ಕೆಎಂಸಿ ಕಾಲೇಜು ವಿದ್ಯಾರ್ಥಿಗಳಾದ ಕೇರಳ ಮೂಲದ ಸಾಹಿನ್ (20) ಮತ್ತು ಮ್ಯಾಥಿವ್ (20) ಎಂಬಿಬ್ಬರು ಗಾಯಗೊಂಡ ಬೈಕ್ ಸವಾರರು. ಮಡಿಕೇರಿಯಿಂದ ಮಂಗಳೂರಿಗೆ ಬೈಕಿನಲ್ಲಿ ವಾಪಸಾಗುತ್ತಿದ್ದ ಸಂದರ್ಭ ಮಂಗಳೂರು-ಬೆಂಗಳೂರು ಹೆದ್ದಾರಿಯ ಸೂರಿಕುಮೇರು ರಸ್ತೆ ತಿರುವಿನಲ್ಲಿ ಮಿತಿಮೀರಿದ ವೇಗದಲ್ಲಿ ಬರುತ್ತಿದ್ದ ಗ್ಯಾಸ್ ಟ್ಯಾಕರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು 108ತುರ್ತು ವಾಹನದ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.