ಕಾರು -ಬೈಕ್ ಡಿಕ್ಕಿ , ಸವಾರರು ಗಂಭೀರ

ವಿಟ್ಲ : ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

12vittla2

ಕಲ್ಲಡ್ಕದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಬೈಕಿಗೆ ಎದುರಿನಿಂದ ಬರುತ್ತಿದ್ದ ಕಾರು ಕೊಡಾಜೆ ಸಮೀಪದ ನೇರಳಕಟ್ಟೆಯಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಬೈಕಿನ ಪೆಟ್ರೋಲ್ ಟ್ಯಾಂಕ್ ಜಖಂಗೊಂಡ ಕಾರಣ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು 108 ತುರ್ತು ವಾಹನದ ಮೂಲಕ ಗಾಯಾಳು ಕಲ್ಲಡ್ಕ ನಿವಾಸಿ ರಂಜಿತ್ ಕುಲಾಲ್ (24) ಮತ್ತು ವಿಶಿತ್ ಶೆಟ್ಟಿ(23)ಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.