ಫೆ 22ರಿಂದ ರಸ್ತೆ ಸಂಚಾರ ಸಮೀಕ್ಷೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮ0ಗಳೂರು : 2017ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆ 22ರಂದು ಸಂಜೆ 6 ಗಂಟೆಯಿಂದ ಫೆ 24ರ ಸಂಜೆ 6ಗಂಟೆಯವರೆಗೆ 2 ದಿನಗಳ ಕಾಲ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ಮುಖ್ಯರಸ್ತೆಗಳ ಆಯ್ದ ಸ್ಥಳಗಳಲ್ಲಿ ನಡೆಯಲಿದೆ.

ಸಮೀಕ್ಷಾ ಕಾರ್ಯ ನಡೆಯುವ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಈ ಸಮೀಕ್ಷಾ ಕೇಂದ್ರಗಳಲ್ಲಿ ಒಂದು ನಿಮಿಷ ವಾಹನ ನಿಲ್ಲಿಸುವ ಮೂಲಕ ರಸ್ತೆ ಸಂಚಾರ ಸಮೀಕ್ಷೆಗೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಸಂಬಂಧಿತ ಅಧಿಕಾರಿಗಳು ತಿಳಿಸಿದ್ದಾರೆ.