ಬಜಪೆ ವಿಮಾನ ನಿಲ್ದಾಣ ರನ್ವೇ ವಿಸ್ತರಣೆÉ ಭೂ ಸ್ವಾಧೀನಕ್ಕೆ 4 ಸಾವಿರ ಕೋಟಿ ರೂ ಅಗತ್ಯ

ಮಂಗಳೂರು :  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆನಗುದಿಗೆ ಬಿದ್ದಿರುವ ರನ್ವೇ ವಿಸ್ತರಣೆ ಕಾಮಗಾರಿಗೆ ಸರಕಾರಕ್ಕೆ ಹೊಸ ಪ್ರಸ್ತಾವನೆ ಮುಂದಿಡಲಾಗಿದ್ದು ಭೂ ಸ್ವಾಧೀನಕ್ಕೆ 4 ಸಾವಿರ ಕೋಟಿ ರೂಪಾಯಿ ಅಗತ್ಯವಿದೆ ಎಂದು ಹೇಳಲಾಗಿದೆ.

ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಗೆ ಸಂಬಂಧಿಸಿ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ನಿನ್ನೆ ನಡೆದ ವಿಶೇಷ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, `ರನ್ವೇ ವಿಸ್ತರಣೆಗೆ ಅಗತ್ಯ ಭೂಮಿಯನ್ನು ಸ್ವಾಧೀನಪಡಿಸಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಈ ಕೆಲಸ ಆದಲ್ಲಿ ರನ್‍ವೇ ವಿಸ್ತರಿಸುವ ಕೆಲಸವನ್ನು ಕೇಂದ್ರ ವಿಮಾನಯಾನ ಸಚಿವಾಲಯ ತಕ್ಷಣ ಕೈಗೆತ್ತಿಕೊಳ್ಳಲಿದೆ’ ಎಂದರು. ಮುಲ್ಕಿ ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್, ಮಂಗಳೂರು ಉಪ ವಿಭಾಗಾಧಿಕಾರಿ ರೇಣುಕಾ ಪ್ರಸಾದ್, ಕೆನರಾ ಚೇಂಬರ್ ಅಧ್ಯಕ್ಷ ಜೀವನ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.