ಮರಳು ಲಾರಿ ವಶಕ್ಕೆ ಚಾಲಕ ಪರಾರಿ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಅನಧಿಕೃತವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಬದಿಯಡ್ಕ ಪೊಲೀಸರು ಸೆರೆ ಹಿಡಿದಿದ್ದಾರೆ.
ಈ ಸಂದರ್ಭ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಶುಕ್ರವಾರ ಮುಂಜಾನೆ ಪೆರ್ಲ ಪರಿಸರದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮರಳು ಲಾರಿಯನ್ನು ಸೆರೆ ಹಿಡಿಯಲಾಗಿದೆ.