ಸಿಆರ್ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ : ಅಧಿಕಾರಿಗಳ ಸಮಿತಿ ರಚಿಸಿದ ದ ಕ ಡೀಸಿ

ಮಂಗಳೂರು : ಸಿಆರ್‍ಝೆಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ಜಿ ಜಗದೀಶ್ ಅವರು 6 ಇಲಾಖೆಗಳ ಅಧಿಕಾರಿಗಳ ಸಮಿತಿಯನ್ನು ರಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ಮಂಗಳವಾರ ಸಭೆ ನಡೆಯಿತು.

ಸಿಆರ್‍ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವ ಸಂಬಂಧ ರಾಷ್ಟ್ರೀಯ ಹಸಿರು ಪೀಠ ನೀಡಿದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಈಗಾಗಲೇ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲನೆ ನಡೆಸಿ, ಸ್ಥಳ ಪರಿವೀಕ್ಷಣೆ ಮಾಡಿ ಬಳಿಕ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.