ಶ್ರೀಗಂಧ ವಶ : ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಶಿರಸಿ : ಬನವಾಸಿ ವಲಯ ಅರಣ್ಯದಲ್ಲಿ ಅಕ್ರಮವಾಗಿ ಕಡಿದ ಅಂದಾಜು 2 ಲಕ್ಷ ರೂ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಳ್ಳತನಕ್ಕೆ ಬಳಸಿದ್ದ ಬೈಕ್ ಹಾಗೂ ಕತ್ತಿ ಮತ್ತಿತರ ಪರಿಕರಗಳನ್ನು ಪಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಾದ ಆನವಟ್ಟಿಯ ಅಸಾದುಲ್ಲಾ ಹಜರತ್ ಅಲಿ ಮತ್ತು ಅನ್ವರ ಖಾನ್ ಮೋದಿನ ಸಾಬ್ ಅವರನ್ನು ಶಿರಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.