ಉ ಪ್ರ ಖಾಸಗಿ ಕಾಲೇಜುಗಳಲ್ಲಿ ಪರಿಶಿಷ್ಟರ ಮೀಸಲಾತಿ ರದ್ದು

ಲಕ್ನೋ : ರಾಜ್ಯದ ಖಾಸಗಿ ವೈದ್ಯಕೀಯ ಮತ್ತು ದಂತ ವಿಜ್ಞಾನ ಕಾಲೇಜುಗಳಲ್ಲಿ ಎಸ್ ಸಿ, ಎಸ್ ಟಿ ಮತ್ತು ಒಬಿಸಿಗಳಿಗೆ ಮೀಸಲಾತಿ ನಿಯಮವನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ. ಮುಂಬರುವ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ ಈ ನೀತಿ ಜಾರಿಗೊಳ್ಳುವಂತೆ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.