ಶಾಲಾ ವಾಹನ ನಿಯಮ ಕಡ್ಡಾಯ ಪಾಲಿಸಲು ಉಡುಪಿ ಡೀಸಿ ಸೂಚನೆ

ನಮ್ಮ ಪ್ರತಿನಿಧಿ ವರದಿ

ಉಡುಪಿ : ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಮಾಲೀಕರು, ಚಾಲಕರು ಹಾಗೂ ಶಿಕ್ಷಣ ಸಂಸ್ಥೆಗಳು, ಮಕ್ಕಳನ್ನು ಸುರಕ್ಷಿತ ಕರೆದೊಯ್ಯಲು  ಸರ್ಕಾರ ರೂಪಿಸಿರುವ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಶಾಲಾ ವಾಹನ ಸುರಕ್ಷತೆ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವಾಹನದ ವಿಮಾ ಪಾಲಿಸಿ ಸೇರಿದಂತೆ, ಅಪಘಾತ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಹೊಂದಿರಬೇಕು, ವಾಹನಗಳಿಗೆ ಹಳದಿ ಬಣ್ಣ ಮತ್ತು ನಾಲ್ಕು ಕಡೆಗಳಲ್ಲಿ `ಶಾಲಾ ವಾಹನ’ ಎಂದು ಸ್ಪಷ್ಟವಾಗಿ ನಮೂದಿಸಿರಬೇಕು, ವಾಹನಗಳಿಗೆ ಕಡ್ಡಾಯವಾಗಿ ಸ್ಪೀಡ್ ಗವರ್ನರ್ ಅಳವಡಿಸಿರಬೇಕು ಹಾಗೂ ವಾಹನಗಳನ್ನು ಸುಸ್ಥಿತಿಯಿಲ್ಲಿಟ್ಟುಕೊಂಡು ನಿಗದಿತ ಸಂಖ್ಯೆಯ ಮಕ್ಕಳನ್ನು ಮಾತ್ರ ಕರೆದೊಯ್ಯುವಂತೆ ಸೂಚಿಸಿದರು.

ಸುರಕ್ಷಿತ ಚಾಲನೆ ಕುರಿತಂತೆ ಪುನರ್‍ಮನನ ತರಬೇತಿ ನೀಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಸುರಕ್ಷತಾ ಸಮಿತಿ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಿ, ಸಭೆಯಲ್ಲಿ ಪೆÇೀಷಕರು, ವಾಹನ ಚಾಲಕರಿಗೆ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಮತ್ತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವಂತೆ, ಮಕ್ಕಳ ಹಕ್ಕುಗಳು, ಪೆÇೀಕ್ಸೋ ಕಾಯಿದೆ ಅನುಷ್ಠಾನದ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿ, ಶಾಲೆಗಳಿಗೆ ಗ್ರೇಡಿಂಗ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮೇರಿ ತಿಳಿಸಿದರು.