ಎಸ್ಡಿಎಂ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೃತ ವಿದ್ಯಾರ್ಥಿ ಅತ್ತಾವರದ ಅಭಿಷೇಕ್ ಸಿ ಎಚ್ (18). ಈತ ಬಿಬಿಎ ವಿಭಾಗದ ನಾಲ್ಕೇ ಸೆಮಿಸ್ಟರಿನಲ್ಲಿದ್ದ.

ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಭಿಷೇಕ್ ತನ್ನ ತಾಯಿ ಆಶಾಲತಾ ಅವರನ್ನು ಬ್ಯಾಂಕಿಗೆ ಕರೆದುಕೊಂಡು ಹೋಗಿ ವಾಪಾಸು ಮನೆಗೆ ಬಂದಿದ್ದು, ತನ್ನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಅಭಿಷೇಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ.

ಈತ ಮುಂಜಾನೆ ತಾಯಿ ಆಶಾಲತಾರಲ್ಲಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದ. ಆದರೆ ಹಣ ನೀಡದೇ ಅವರು ಬದ್ಧಿವಾದ ಹೇಳಿದ್ದರು. ಅಭಿಷೇಕ್ ತಂದೆ ಚಿದಾನಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಮತ್ತು ಅಭಿಷೇಕ್, ಸಹೋದರ ಅಶ್ವಿನ್ ನಗರದಲ್ಲಿ ವಾಸ ಮಾಡಿಕೊಂಡಿದ್ದಾರೆ. ಸಹೋದರಿ ಅಶ್ವಿತ ಬೆಂಗಳೂರಿನಲ್ಲಿ  ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಸಹಪಾಠಿಗಳೊಂದಿಗೆ  ಅತ್ಯುತ್ತಮ ಒಡನಾಟ ಹೊಂದಿದ್ದ ಅಭಿಷೇಕ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಹಪಾಠಿಗಳು ಆಸ್ಪತ್ರೆಗೆ ಆಗಮಿಸಿ ಕಣ್ಣೀರಿಡುತ್ತಿದ್ದ ದೃಶ್ಯ ಕಂಡು ಬಂತು.

ಅಭಿಷೇಕ್ ತಂದೆ ಚಿದಾನಂದ ಅವರು ಈತನನ್ನು ವಿದೇಶಕ್ಕೆ ಕರೆದೊಯ್ಯಲು ಇಚ್ಚಿಸಿದ್ದರು ಎಂದು ಹೇಳಲಾಗಿದೆ. ಆದರೆ ಇದು ಅಭಿಷೇಕಗೆ ಮನಸ್ಸಿರಲಿಲ್ಲ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪಾಂಡೇಶ್ವರ ಪೆÇಲೀಸರು ಭೇಟಿ ನೀಡಿ ತನಿಖೆ ನಡೆಸಿದರು.