ನೀರಿಗೆ ಬಿದ್ದ ಮೀನುಗಾರ ನಾಪತ್ತೆ : ಹುಡುಕಾಟ

ಸಾಂದರ್ಭಿಕ ಚಿತ್ರ

ಮಂಗಳೂರು : ಮೀನುಗಾರಿಕೆ ವೃತ್ತಿ ಮಾಡಲೆಂದು ಅನ್ಯರಾಜ್ಯದಿಂದ ನಗರಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

ಹಳೆ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಮೀನು ಹಿಡಿಯುವ ಕೆಲಸಕ್ಕೆ ಬಂದಿದ್ದ ಜಾರ್ಝಂಡದÀ ಮೋತಿರಾಂ ಸಾಯ್(40) ಎ.7ರಂದು ದಕ್ಕೆಯಲ್ಲಿ ಕೆಲಸಮಾಡುತ್ತಿದ್ದಾಗ  ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ.

ಇವರ ಪತ್ತೆಗಾಗಿ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಪತ್ತೆಯಾದಲ್ಲಿ ಪಾಂಢೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆÉ.