ದಕ್ಷಿಣ ಕನ್ನಡ ನೂತನ ಡೀಸಿಯಾಗಿ ಶಶಿಕಾಂತ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ.

ಪ್ರಸ್ತುತ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕೆ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, 2009ರ ಐಎಎಸ್ ಬ್ಯಾಚಿನ ಶಶಿಕಾಂತ್ ಸೆಂಥಿಲ್ ಅವರನ್ನು ನಿಯುಕ್ತಿಗೊಳಿಸಿದೆ.

ಪ್ರಸ್ತುತ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದ ಶಶಿಕಾಂತ್ ಸೆಂಥಿಲ್ ಅವರನ್ನು ಮಂಗಳೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ವರ್ಗಾವಣೆಗೊಂಡ ಅವರ ಜಾಗಕ್ಕೆ ಕೆ ಜಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ. 2016ರ ಜುಲೈ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಜಗದೀಶ್ ಅಧಿಕಾರ ಸ್ವೀಕರಿಸಿದ್ದರು.

ತಮಿಳುನಾಡು ಮೂಲದ ಸೆಂಥಿಲ್ ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಅವರು ಇಲೆಕ್ಟ್ರಿಕಲ್ ಅಂಡ್ ಕಮ್ಯೂನಿಕೇಶನ್ನಿನಲ್ಲಿ ಬಿಇ ಡಿಗ್ರಿ ಪಡೆದುಕೊಂಡಿದ್ದಾರೆ.