ರಾಜ್ಯ ಕೋಮುಗಲಭೆ ಸೃಷ್ಟಿಗೆ ಶಾ ಯತ್ನ : ಸೀಎಂ ಆರೋಪ

ಬೆಳಗಾವಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆರೋಪಿಸಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೂ ಮುನ್ನ ಕೋಮುಗಲಭೆಗಳನ್ನು ಸೃಷ್ಟಿಸಿ ಮತ ಬಾಚಿಕೊಳ್ಳುವ ಹುನ್ನಾರ ನಡೆಸಿದ್ದಾರೆ ಎಂದರು. ನಗರದಲ್ಲಿ ಏರ್ಪಡಿಸಲಾದ ಕಾಂಗ್ರೆಸ್ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳು, ಬಿಜೆಪಿ ಮುಂಬರುವ ಚುನಾವಣೆಯಲ್ಲಿ 60ರಿಂದ 70 ಸ್ಥಾನಗಳನ್ನೂ ಸಹ ಗೆಲ್ಲಲಾರದು ಎಂದು ಅಭಿಪ್ರಾಯಪಟ್ಟರು.