ಕರಾವಳಿಯಲ್ಲಿ ಶಿವರಾತ್ರಿ ಸಂಭ್ರಮ

ಕರಾವಳಿ ಅಲೆ  ವರದಿ

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಶಿವದೇವಾಲಯಗಳಲ್ಲಿ ಮಂಗಳವಾರದಂದು ರಾತ್ರಿ ಶಿವರಾತ್ರಿಯನ್ನು ಶ್ರದ್ಧಾಪೂರ್ವಕವಾಗಿ ಭಕ್ತಿಭಾವದಿಂದ ಆಚರಿಸಲಾಯಿತು.

ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ, ಭಜನಾ ಕಾರ್ಯಕ್ರಮಗಳು ನಡೆದವು. ಶಿವ ಜಾಗರಣೆ ಮಾಡಿ, ಉಪವಾಸವನ್ನು ಆಚರಿಸಿ ಶಿವ ಪೂಜೆ ನೆರವೇರಿಸಿ ಹಲವು ಮಂದಿ ಧನ್ಯರಾದರು.

ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇಗುಲ, ಕದ್ರಿ ಜೋಗಿ ಮಠ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಸೇರಿದಂತೆ ಹಲವು ಶಿವ ಸನ್ನಿಧಿಯಲ್ಲಿ ಭಕ್ತರು ಶಿವ ಆರಾಧನೆ ಮಾಡಿದರು. ಕದ್ರಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿತ್ತು. ಎಲ್ಲಾ ದೇವಾಲಯಗಳಲ್ಲಿ ಶಿವರಾತ್ರಿ ಹಿನ್ನೆಲೆಯಲ್ಲಿ ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು.

LEAVE A REPLY