ಅವಿವಾಹಿತ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮೂಡಬಿದಿರೆ : ಎಲೆಕ್ಟ್ರಿಷಿಯನ್ನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಸ್ತಿಕಟ್ಟೆ ನಿವಾಸಿ ಜಯ ಭಂಡಾರಿ (40) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ಸಂಜೆ ವೇಳೆಗೆ ಮನೆಯ ಹತ್ತಿರದ ಒಂದು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವಿವಾಹಿತ ಜಯ ತನ್ನ ಅಣ್ಣ ಪ್ರಕಾಶ್ ಭಂಡಾರಿ ಜತೆ ವಾಸವಾಗಿದ್ದು, ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.