ಶಿಕ್ಷೆ ಕೊಡಿಸುವಲ್ಲಿ ರಾಜ್ಯ ಪೊಲೀಸ್ ಬಹಳ ಹಿಂದೆ

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜಧಾನಿಯಲ್ಲಿ ಹೊಸ ವರ್ಷದಲ್ಲಿ ಬೆಳಕಿಗೆ ಬಂದ ಹಲವಾರು ಲೈಂಗಿಕ ಕಿರುಕುಳ ಪ್ರಕರಣಗಳು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂಬ ಕೂಗು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಆದರೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ನೀಡಲಾದ ಪ್ರಕರಣಗಳು ಕರ್ನಾಟಕದಲ್ಲಿ ಬಹಳಷ್ಟು ಕಡಿಮೆ ಎಂಬುದು  ನ್ಯಾಷನಲ್ ಕ್ರೈಂ ರೆಕಾಡ್ರ್ಸ್ ಬ್ಯುರೋದÀ 2015 ವರದಿಯನ್ನು ಪರಿಶೀಲಿಸಿದಾಗ ಸ್ಪಷ್ಟವಾಗುತ್ತದೆ.

2015ರಲ್ಲಿ ಈ ಸಂಬಂಧ  ಒಟ್ಟು 5,112 ಪೊಲೀಸ್ ದೂರು ದಾಖಲಾಗಿದ್ದರೆ  ನ್ಯಾಯಾಲಯದ ಮೆಟ್ಟಿಲು ಹತ್ತಿದ ಒಟ್ಟು 4,302 ಪ್ರಕರಣಗಳಲ್ಲಿ  ಕೇವಲ 69ರಲ್ಲಿ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. ಶಿಕ್ಷೆಯ ಪ್ರಮಾಣ ಕೇವಲ 1.6 ಶೇ ಆಗಿದ್ದು ಇದು ರಾಷ್ಟ್ರೀಯ ಸರಾಸರಿಗಿಂತ (12.5 ಶೇ) ಬಹಳಷ್ಟು ಕಡಿಮೆಯಾಗಿದೆ. ಕರ್ನಾಟಕದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಕೂಡ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ.

ವಿ ಎಸ್ ಉಗ್ರಪ್ಪ ನೇತೃತ್ವದ ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ ಕೂಡ  ಕಳೆದ ವರ್ಷ ಸಲ್ಲಿಸಿದ ತನ್ನ ವರದಿಯಲ್ಲಿ  ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ 3 ಎಂದು ಹೇಳಿದೆ.