ಹೆಬ್ರಿ ಕಳ್ತೂರು ಕೆಂಪು ಕಲ್ಲು ಕೋರೆಗೆ ದಾಳಿ : ಯಂತ್ರಗಳು ವಶಕ್ಕೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಹೆಬ್ರಿ ಸಮೀಪದ ಸಂತೆಕಟ್ಟೆ ಕಳ್ತೂರು ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಇಲಾಖೆಯ ಪರವಾನಿಗೆ ಪಡೆಯದೇ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಕುರಿತು ಬಂದಿರುವ ದೂರಿನ ಹಿನ್ನಲೆಯಲ್ಲಿ ಬುಧವಾರ ಗಣಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಣಿಗಾರಿಕೆಗೆ ಬಳಸುತ್ತಿದ್ದ 2 ಪವರ್ ಟಿಲ್ಲರ್, ಕಟ್ಟಿಂಗ್ ಬ್ಲೇಡ್ ಸಹಿತ 2,20 ಲಕ್ಷ ರೂ ಮೌಲ್ಯದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡು ಆರೋಪಿ ಜೆಬಿನ್ ವಿರುದ್ಧ ಪ್ರಕರಣ ಗಣಿ ಇಲಾಖೆ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.