ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಅಪಪ್ರಚಾರ : ವಿದ್ಯಾರ್ಥಿ ವಿರುದ್ಧ ಕೇಸು

ಸಾಂದರ್ಭಿಕ ಚಿತ್ರ

 

ನಮ್ಮ ಪ್ರತಿನಿಧಿ ವರದಿ

ಕಾರವಾರ : ಸಾಮಾಜಿಕ ಜಾಲತಾಣಗಳಲ್ಲಿ ದಲಿತರ ವಿರುದ್ಧ ಅವಹೇಳಕನಕಾರಿಯಾಗಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ವಿದ್ಯಾರ್ಥಿಯೊಬ್ಬನ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡವಾಡ ನಿವಾಸಿ ವಿದ್ಯಾರ್ಥಿ ದರ್ಶನ ರೇವಣ್ಕರ್ (21) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ದಲಿತರ ವಿರುದ್ಧ ಅವಹೇಳನಕಾರಿಯಾಗಿ ಬರೆದು, ಫೇಸ್ಬುಕ್ಕಿನಲ್ಲಿ ಫೋಸ್ಟ್ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಕರ್ನಾಟಕ ದಲಿತ ಸಂಘರ್ಷ ಸಮಿತಿ ಈ ವಿದ್ಯಾರ್ಥಿಯ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸುವಂತೆ ಎಸ್ಪಿಗೆ ದೂರು ಸಲ್ಲಿಸಿ ಒತ್ತಾಯಿಸಿತ್ತು ಹಾಗಾಗಿ ಎಸ್ಪಿ ಆದೇಶದ ಮೇರೆಗೆ ದರ್ಶನ ರೇವಣ್ಕರ್ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿದೆ.