ಕಾರು ಡಿಕ್ಕಿ : ವಿದ್ಯಾರ್ಥಿ ಆಸ್ಪತ್ರೆಗೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರವಾರ : ಇಲ್ಲಿನ ಅಮದಳ್ಳಿಯ ಕಾಲೇಜು ಎದುರು ಬುಧವಾರ ಕಾರೊಂದು ಪ್ರೌಢಶಾಲಾ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.

ಅಮದಳ್ಳಿ ನಿವಾಸಿ ಯುವರಾಜ ಗೌಡ ಗಾಯಗೊಂಡ ವಿದ್ಯಾರ್ಥಿ. ಇವನು ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿರುವಾಗ ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಕಾರು ಎದುರಿನಿಂದ ಬಂದ ಬಸ್ಸನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ಕಾರು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸಾಗಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY