ಹೃದಯಾಘಾತಕ್ಕೆ ವಿದ್ಯಾರ್ಥಿನಿ ಬಲಿ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕೌಟುಂಬಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು.

ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿನಿ ಪ್ರಿನ್ಸಿಕಾ ಮಸ್ಕರೇನ್ಹಸ್ (19) ಮೃತಳು. ಜ 3ರಂದು ಇವರು ಕೌಟುಂಬಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕೋಮಾ ಸ್ಥಿತಿಯಲ್ಲಿದ್ದರು. ಈಕೆ ಕೆಲಂಬೆಟನ ಪೀಟರ್ ಮಸ್ಕರೇನ್ಹಸ್ ಮತ್ತು ಮೇರಿ ಮಸ್ಕರೇನ್ಹಸ್ ದಂಪತಿ ಮಗಳಾಗಿದ್ದರು.