ಕಳಪೆ ಕಾಮಗಾರಿ ಆರೋಪ : ಸ್ಥಳ ಪರಿಶೀಲಿಸಿದ ಲೋಕಾಯುಕ್ತ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪಚ್ಚನಾಡಿ ಮರಿಯ ನಗರದಲ್ಲಿ ನಡೆದಿರುವ ಕಾಂಕ್ರೀಟು ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಅವ್ಯವಹಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.

ನಿಯಾಮನುಸಾರವಾಗಿ ರಸ್ತೆ ನಿರ್ಮಿಸಿಲ್ಲ. ಕಾಮಗಾರಿ ಕಳಪೆಯಾಗಿದೆ. ಚರಂಡಿ ಮಾಡಿಲ್ಲ ಎಂದು ಆರ್ ಟಿ ಐ ಕಾರ್ಯಕರ್ತರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಾರ್ಡಿನ ಕಾರ್ಪೊರೇಟರ್ ಹಾಗೂ ಇಂಜಿನಿಯರ್ ಶಾಮೀಲಾಗಿ ಈ ಕಾಂಕ್ರಿಟ್ ಕಾಮಗಾರಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಅವರು ದೂರಿದ್ದರು.