ಎತ್ತಿನಹೊಳೆ ಯೋಜನೆ ವಿರೋಧಿಸಿ ಜ 26ರಿಂದ ಸರ್ಜಿಕಲ್ ಸ್ಟ್ರೈಕ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನೇತ್ರಾವತಿ ನದಿ ತಿರುಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಅಧಿಕಾರಿಗಳು ಪ್ರದರ್ಶನ ಮಾಡಿದ್ದಾರೆ ಎಂದು ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, “ಮುಖ್ಯಮಂತ್ರಿಯ ಸಭೆಯ ಬಳಿಕ ಹೋರಾಟಗಾರರಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಯಾವುದೇ ಸೂಚನೆ ಕಂಡು ಬರುತ್ತಿಲ್ಲ. ನ್ಯಾಯಾಂಗ ಸಮರ ಮುಂದುವರಿಸಿದ್ದೇವೆ. ಜ 26ರಿಂದ ನಮ್ಮ ಹೋರಾಟ ತೀವ್ರಗೊಳ್ಳಲಿದ್ದು, ಸರ್ಜಿಕಲ್ ಸ್ಟ್ರೈಕ್ ಮಾದರಿ ಹೋರಾಟ ನಡೆಯಲಿದೆ. ಸರಕಾರಿ ಅಧಿಕಾರಿಗಳು, ಸರಕಾರ ಉದ್ದೇಶಪೂರ್ವಕವಾಗಿ ಸರ್ವೇ ರಿಪೋರ್ಟನ್ನು ತಮಗಿಷ್ಟ ಬಂದಂತೆ ಮಾಡುತ್ತಿದ್ದಾರೆ. ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ” ಎಂದರು.