ಟಾಟಾ ಏಸ್ ಪಲ್ಟಿ : ಇಬ್ಬರಿಗೆ ಗಾಯ

ಕ್ರೇನ್ ಮೂಲಕ ಪಲ್ಟಿಯಾದ ವಾಹನ ಎತ್ತುತ್ತಿರುವುದು

ನಮ್ಮ ಪ್ರತಿನಿಧಿ ವರದಿ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡು ಬಳಿ ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಲ್ಲಿ ಸಾಗುತ್ತಿದ್ದ ವಾಹನ ಕೋಲ್ನಾಡು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಧಾವಿಸಿ ವಾಹನದೊಳಗೆ ಇದ್ದ ಇಬ್ಬರನ್ನು ಹೊರತೆಗೆದಿದ್ದಾರೆ. ವಾಹನ ಚಾಲಕ ಮತ್ತು ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಳಿಕ ಕ್ರೇನ್ ತರಿಸಿ ವಾಹನವನ್ನು ಮೇಲೆತ್ತಲಾಯಿತು. ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.