ವಿದ್ಯಾರ್ಥಿಗಳಿಗೆ ಅಧ್ಯಾಪಕ ಹಲ್ಲೆ

ನಮ್ಮ ಪ್ರತಿನಿಧಿ ವರದಿ
ಮಂಜೇಶ್ವರ : ಹೋಮ್ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಮದ್ರಸ ಅಧ್ಯಾಪಕ ವಿದ್ಯಾರ್ಥಿಗಳನ್ನು ಹಲ್ಲೆಗೈದು ಗಾಯಗೊಳಿಸಿದ ಘಟನೆ ಶಿರಿಯಾ ಮದ್ರಸದಲ್ಲಿ ನಡೆದಿದೆ
ಶಿರಿಯಾ ಮದ್ರಸದಲ್ಲಿ ಕಲಿಯುತ್ತಿರುವ ಆರನೇ ತರಗತಿ ವಿದ್ಯಾರ್ಥಿಗಳಿಗೆ ಅಧ್ಯಾಪಕ ಬೆತ್ತದಿಂದ ಗಂಭೀರವಾಗಿ ಹಲ್ಲೆಗೈದು ಗಾಯಗೊಳಿಸಿರುವುದಾಗಿ ದೂರಲಾಗಿದೆ  ಹಲ್ಲೆಯಿಂದ ಒಬ್ಬ ಬಾಲಕನ ಕಾಲು ಹಾಗೂ ತೊಡೆಗಳಲ್ಲಿ ಗಾಯಗಳು ಕಂಡುಬಂದಿವೆ  ಈ ಬಗ್ಗೆ ವಿದ್ಯಾರ್ಥಿಗಳು ಮನೆಯಲ್ಲಿ ಹೇಳಿರಲಿಲ್ಲ  ಮನೆಯಲ್ಲಿ ಬಟ್ಟೆ ಬದಲಾಯಿಸುವಾಗ ದೇಹದಲ್ಲಿ ಗಾಯಗಳು ಕಂಡುಬಂದ ಹಿನ್ನೆಲೆಯಲ್ಲಿ ಹೆತ್ತವರು ವಿಚಾರಿಸಿದಾಗ ಅಧ್ಯಾಪಕರು ಹೊಡೆದಿರುವುದಾಗಿ ತಿಳಿದುಬಂದಿದೆ  ಈ ಹಿನ್ನೆಲೆಯಲ್ಲಿ ಚೈಲ್ಡ್ ಲೈನಿಗೆ ಮಾಹಿತಿ ನೀಡಿದ್ದಾರೆ  ಮನೆಗೆ ಬಂದ ಚೈಲ್ಡ್ ಲೈನ್ ಅಧಿಕಾರಿಗಳು ಹೇಳಿಕೆ ದಾಖಲಿಸಿ ವಿದ್ಯಾರ್ಥಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ