ಕೇಂದ್ರ, ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಂಜಿನ ಮೆರವಣಿಗೆ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಕೇಂದ್ರ, ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಐ ಎನ್ ಟಿ ಯು ಸಿ ವತಿಯಿಂದ ಪೆರ್ಲ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಐ ಎನ್ ಟಿ ಯು ಸಿ ಜಿಲ್ಲಾ ಕಾರ್ಯದರ್ಶಿ ಶಾಹುಲ್ ಹಮೀದ್ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು.

ರಾಜ್ಯ ಸರಕಾರ ಜನವಿರೋಧಿ ನೀತಿ ಅನುಸರಿಸಬಾರದು. ಅಧಿಕಾರಕ್ಕೆ ಬರುವ ಮೊದಲು ಎಲ್ಲವನ್ನೂ ಸರಿ ಮಾಡುವುದಾಗಿ ಹೇಳಿದ ವಾಗ್ದಾನವನ್ನು ಪಾಲಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಮೆರವಣಿಗೆಯಲ್ಲಿ ನೇತಾರರ ಸಹಿತ ಕಾರ್ಯಕರ್ತರು ಪಾಲ್ಗೊಂಡಿದ್ದರು.

LEAVE A REPLY