ನಿಂತಿದ್ದ ಬಸ್ಸಿಗೆ ಟ್ರ್ಯಾಕ್ಟರ್ ಡಿಕ್ಕಿ : ಚಾಲಕ ಗಂಭೀರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುತ್ತಿದ್ದ ಚಾಲಕ ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಗರದ ಬೊಂದೇಲ್ ಸಂತ ಲಾರೆನ್ಸ್ ಚರ್ಚ್ ಮುಂಭಾಗದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಚಾಲಕ ಉತ್ತರ ಕನ್ನಡ ನಿವಾಸಿ ಶಿವಾನಂದ (30) ಗಾಯಗೊಂಡಿದ್ದು, ಈತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಂದೇಲ್ ಕಡೆಯಿಂದ ಬಂದ ಟ್ರ್ಯಾಕ್ಟರ್ ಚಾಲಕ ಶಿವಾನಂದ ಪಚ್ಚನಾಡಿ ಕಡೆಗೆ ತನ್ನ ವಾಹನವನ್ನು ತಿರುಗಿಸಿದ್ದು, ಇದೇ ಸಂದರ್ಭದಲ್ಲಿ ಪಚ್ಚನಾಡಿ ಕಡೆಗೆ ತೆರಳಲೆಂದು ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ನುಜ್ಜುಗುಜ್ಜಾಗಿದೆ. ಪಲ್ಟಿಯಾದ ಸಂದರ್ಭ ಚಾಲಕ ಶಿವರಾಜ ಟ್ರ್ಯಾಕ್ಟರಿನಡಿ ಸಿಲುಕಿಕೊಂಡಿದ್ದು ಆತನನ್ನು ಬಳಿಕ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

LEAVE A REPLY