ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಳ ಸಂಯುಕ್ತ ಟ್ರೇಡ್ ಯೂನಿಯನ್ ಪ್ರತಿಭಟನೆ ಧರಣಿ

ಸಂಯುಕ್ತ ಟ್ರೇಡ್ ಯೂನಿಯನ್ ಪ್ರತಿಭಟನಾ ಮೆರವಣಿಗೆ

ನಮ್ಮ ಪ್ರತಿನಿಧಿ ವರದಿ
ಮಂಜೇಶ್ವರ : ಸಂಯುಕ್ತ ಟ್ರೇಡ್ ಯೂನಿಯನ್ ಪ್ರತಿಭಟನಾ ಸಮಿತಿ ವತಿಯಿಂದ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಅಂಚೆ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿಯನ್ನು ಹಮ್ಮಿಕೊಳ್ಳಲಾಯಿತು. ಕಾಸರಗೋಡಿನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿಯೂ ಹಲವಾರು ಮಂದಿ ಕಾರ್ಮಿಕರು ಪಾಲ್ಗೊಂಡರು.
ಕಾಸರಗೋಡು ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಎಸ್ ಟಿ ಯು ಜಿಲಾ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೇಂದ್ರದಲ್ಲಿ ಅಧಿಕಾರದ ಗದ್ದುಗೆಯನ್ನೇರಿದ ಬಿಜೆಪಿ ಸರಕಾರ ಬಡ ಕಾರ್ಮಿಕರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಕಾರ್ಪರೇಟ್ ಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುತ್ತಿರುವ ಸರಕಾರ ಎಲ್ಲಾ ವಲಯದಲ್ಲೂ ಬಡ ಜನತೆಯನ್ನು ವಂಚಿಸುತ್ತಿದೆ ಎಂದು ಅವರು ಆರೋಪಿಸಿದರು. ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಅಧಿಕಗೊಳ್ಳುತ್ತಲೇ ಇರುವುದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದರು.