ಸರಣಿ ಅಪಘಾತದಲ್ಲಿ ಸಾರಿಗೆ ಅಧಿಕಾರಿ ಗಂಭೀರ ಗಾಯ

ನಮ್ಮ ಪ್ರತಿನಿಧಿ ವರದಿ

ವಿಟ್ಲ : ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂರು ವಾಹನಗಳು ಜಖಂಗೊಂಡು ಸಾರಿಗೆ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಣಿ ಸಮೀಪದ ಸೂರಿಕುಮೇರು ಎಂ¨ಲ್ಲಿ ರಸ್ತೆ ಬದಿ ನಿಂತಿದ್ದ ಸರಕು ಸಾಗಾಟದ ಮಿನಿ ಲಾರಿಯ ಹಿಂಬದಿಗೆ ಕಟೀಲು ಮೇಳದ ಬಸ್ಸು ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರೂ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಅದೃಷ್ಟವಶಾತ್ ತಪ್ಪಿದಂತಾಗಿದೆ. ಇದೇ ಸಂದರ್ಭ ಎದುರಿನಿಂದ ಬರುತ್ತಿದ್ದ ಕಾರು

ಅಪಘಾತವನ್ನು ತಪ್ಪಿಸುವ ಭರದಲ್ಲಿ ರಸ್ತೆ ಬದಿಯ ಚರಂಡಿಗೆ ಉರುಳಿದೆ. ಪರಿಣಾಮ ಪುತ್ತೂರು ಸಾರಿಗೆ ಇಲಾಖೆಯ ಅಧಿಕಾರಿ ಫೆಲಿಕ್ಸ್ (52) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿದ್ದು ಕಟೀಲು ಮೇಳದ ಬಸ್ಸಿನಲ್ಲಿದ್ದ ಕಲಾವಿದರು ಮತ್ತು ಸಿಬ್ಬಂದಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

LEAVE A REPLY