ಆತ್ಮಹತ್ಯೆಗೆ ಯತ್ನಿಸಿದ್ದ ಮೂವರಲ್ಲಿ ಇಬ್ಬರ ಸಾವು

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಆಸ್ತಿ ತಕರಾರಿನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಮೂವರ ಪೈಕಿ ತಾಯಿ ಹಾಗೂ ಮಗ ಮೃತಪಟ್ಟಿದ್ದು, ಮಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಜಯಗೋಪಿ (66) ಅವರ ಪುತ್ರ ಸುರೇಶ್ (46) ಎಂದು ಗುರುತಿಸಲಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ ಶೋಭಾ (48)ರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಆಸ್ತಿ ವಿಷಯದ ತಕರಾರಿನ ಹಿನ್ನೆಲೆಯಲ್ಲಿ  ತಾಯಿ ಮತ್ತು ಮಗಳು ಬಾವಿಗೆ ಹಾರಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಇವರಿಬ್ಬರು ಬಾವಿಗೆ ಹಾರಿದ್ದನ್ನು ಕಂಡ ಪುತ್ರ ಸುರೇಶ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಡೆತ್ ನೋಟಿನಲ್ಲಿ ತನ್ನ ಸಾವಿಗೆ ತನ್ನ ಪತ್ನಿ ಆಶಾ ಕಾರಣ ಎಂದು ಉಲ್ಲೇಖಿಸಿದ್ದಾರೆ. ಘಟನೆ ಬಳಿಕೆ ಸುರೇಶ್ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.