ಪೊಲೀಸ್ ಸಿಬ್ಬಂದಿಯಿಂದ ಲಂಚ : ವಿಡಿಯೋ ವೈರಲ್

ಮಂಗಳೂರು : ಬಜ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಬಜ್ಪೆ ಠಾಣಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಸಿಬ್ಬಂದಿಯೊಬ್ಬರು ಅಕ್ರಮ ಮರಳು ಸಾಗಾಟದ ಲಾರಿಯೊಂದನ್ನು ತಡೆದು ನಿಲ್ಲಿಸಿ ತಪಾಸಣೆಗೆ ಮುಂದಾದ ವೇಳೆ ಇದು ಅಕ್ರಮ ಸಾಗಾಟ ಎನ್ನುವುದು ಖಚಿತವಾಗಿದೆ. ಅಲ್ಲದೆ ಲಾರಿ ಚಾಲಕ ಸಮವಸ್ತ್ರ ಹಾಕಲಿಲ್ಲ ಎಂದು ಲಾರಿಯನ್ನು ನಿಲ್ಲಿಸಿದ್ದಾನೆ. ಆತ ಲಾರಿಯಿಂದ ಕೆಳಗಿಳಿದು ಬಂದು, ಜೀಪಿನ ಹಿಂಭಾಗಕ್ಕೆ ಆತನನ್ನು ಕರೆದುಕೊಂಡು ಹೋಗಿ ಅಲ್ಲಿ ತನ್ನ ವ್ಯವಹಾರವನ್ನು ಕುದುರಿಸಿಕೊಂಡಿದ್ದಾನೆ.

ಲಾರಿ ಚಾಲಕ ತನ್ನ ಜೇಬಿನಿಂದ ದುಡ್ಡು ತೆಗೆದು ಪೊಲೀಸಿಗೆ ನೀಡುವ, ಆತ ಹಣ ಪಡೆದುಕೊಂಡು ಜೇಬಿಗೆ ಹಾಕುವ ದೃಶ್ಯಗಳು ವಿಡಿಯೋ ರೆಕಾರ್ಡ್ ಆಗಿದೆ.

ಈ ವಿಡಿಯೋವನ್ನು ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಹಾಕಲಾಗಿದ್ದು, ಇದನ್ನು ಕಂಡ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯ ವಿಚಾರಣೆ ನಡೆಸುವಂತೆ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲಂಚ ಸ್ವೀಕರಿಸಿಕೊಂಡ ಪೊಲೀಸ್ ಸಿಬ್ಬಂದಿ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ದನ ಸಾಗಾಟ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಗ್ಗೆ ಬಹಳಷ್ಟು ಶ್ರಮ ವಹಿಸಿದ್ದರು. ನಗರ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರವನ್ನೂ ಪಡೆದುಕೊಂಡಿದ್ದರು ಎನ್ನಲಾಗುತ್ತಿದೆ.