ಪತಿಯಿಂದ ಪತ್ನಿಗೆ ಹಲ್ಲೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರವಾರ : ಮದ್ಯ ಸೇವಿಸಿದ ಅಮಲಿನಲ್ಲಿದ್ದ ಪತಿಯು ಪತ್ನಿಯ ಮೇಲೆ ಹಲ್ಲೆ ಮಾಡಿದ ಘಟನೆ ನಗರದ ಸರ್ವೋದಯನಗರದಲ್ಲಿ ಮಂಗಳವಾರ ನಡೆದಿದೆ.

ನಗರದ ಸರ್ವೋದಯನಗರ ನಿವಾಸಿ ಅನಿಲ ಬಾನಾವಳಿ (48) ಹಲ್ಲೆ ಮಾಡಿದ ಪತಿ. ಇವರು ಕುಡಿದ ಅಮಲಿನಲ್ಲಿ ಪತ್ನಿ ಶೈಲಾ ಜತೆಗೆ ಜಗಳವಾಡಿ, ಹಲ್ಲೆ ನಡೆಸಿದ್ದಾನೆ. ಈ ಜಗಳ ತಡೆಯಲು ಮುಂದಾದ ಮಗಳಿಗೂ ಅವಾಚ್ಯವಾಗಿ ನಿಂದಿಸಿದ್ದಾನೆ. ಗಂಭೀರ ಗಾಯಗೊಂಡ ಶೈಲಾಳನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY