ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮ : ಮಿಥುನ್

 ನಮ್ಮ ಪ್ರತಿನಿಧಿ ವರದಿ

 ಮಂಗಳೂರು : “ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ಸನ್ನು ಬಲಪಡಿಸುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾರನ್ನೂ ನೋಯಿಸುವ ಉದ್ದೇಶ ಇಲ್ಲ. ಚುನಾವಣೆ ಬಳಿಕ ನಾವೆಲ್ಲರೂ ಒಂದಾಗಿದ್ದು, ಯಾವುದೇ ವೈಮನಸ್ಸು ಇಲ್ಲ” ಎಂದು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಮುಕ್ತ ದಕ್ಷಿಣ ಕನ್ನಡ ನಿರ್ಮಾಣ ನಮ್ಮ ಗುರಿಯಾಗಿದ್ದು, ನಮ್ಮ ದೃಷ್ಟಿ ಮುಂದಿನ ಅಸೆಂಬ್ಲಿ ಚುನಾವಣೆಯಾಗಿದೆ. ಕಾಂಗ್ರೆಸ್ಸಿನ ಎಲ್ಲಾ ಅಭ್ಯರ್ಥಿಗಳೂ ಗೆಲ್ಲಬೇಕು ಎನ್ನುವುದು ನಮ್ಮ ಆಶಯವಾಗಿದ್ದು, ಅವರ ಗೆಲುವಿದಾಗಿ ನಾವು ದುಡಿಯಲಿದ್ದೇವೆ” ಎಂದರು. ಮತದಾನ ಮಾಡಿದ ಎಲ್ಲಾ ಮತದಾರರಿಗೆ, ಆಯ್ಕೆಯಾಗಿ ಬಂದ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದರು.