ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಪುತ್ತೂರು: ಕೊಳ್ತಿಗೆ ಗ್ರಾಮದ ಮಾಲೆತ್ತೋಡಿ ನಿವಾಸಿ ಕಮಲ (63) ರವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಹಾಗೂ ಮರೆವು ಖಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ ಮಧ್ಯಾಹ್ನ ವೇಳೆ ಮನೆಯಲ್ಲಿ ಏನೋ ಹುಡುಕಾಡುತ್ತಿದ್ದರು. ಮನೆಯಲ್ಲಿದ್ದ ತೋಟಕ್ಕೆ ಸಿಂಪಡಿಸಲು ತಂದ ಔಷಧಿಯನ್ನು ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.