ಲಾರಿ ಸಹಿತ ಮರದ ದಿಮ್ಮಿಗಳ ವಶ

ನಮ್ಮ ಪ್ರತಿನಿಧಿ ವರದಿ

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ದಾಳಿ ನಡೆಸಿ ಲಾರಿ ಸಹಿತ ಸಾಗಾಟ ಮಾಡುತ್ತಿದ್ದ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವೇಣೂರು ಅರಣ್ಯ ಇಲಾಖಾಧಿಕಾರಿಗಳು ಬುಧವಾರ ಮುಂಜಾನೆ ಮರೋಡಿ ಗ್ರಾಮದ ಕೂಕ್ರಬೆಟ್ಟು ಎಂಬಲ್ಲಿ ದಾಳಿ ನಡೆಸಿ ಲಾರಿ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯಂತೆ ದಾಳಿ ನಡೆಸಿ ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಲಾರಿ ಸಹಿತ 4 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿ ರಾಜೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.