ಕೋಮು ವಿವಾದಕ್ಕೆ ಎಡೆಯಾದ ಅರ್ಥಗಾರಿಕೆ

ಹೀಗೊಂದು ಯಕ್ಷಗಾನ ವಿಡಿಯೋ ವೈರಲ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಯಕ್ಷಗಾನ ಪ್ರಸಂಗದಲ್ಲಿ ಮುಸ್ಲಿಂ ಜನಾಂಗವನ್ನು ಕೆಟ್ಟದಾಗಿ ಚಿತ್ರೀಕರಿಸಲಾಗಿರುವ ವಿಡಿಯೋವೊಂದು ವೈರಲ್ ಆಗಿರುವ ಬೆನ್ನಲ್ಲೇ ಕಿಡಿಗೇಡಿಗಳು ಕ್ಷಮೆ ಯಾಚನೆ ಮಾಡಿ ಇದನ್ನು ಕೂಡಲೇ ತೆಗೆದು ಹಾಕಬೇಕು ಮತ್ತು ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇನ್ನೊಂದು ಪೋಸ್ಟ್ ವೈರಲ್ ಆಗಿದೆ.

ಯಕ್ಷಗಾನದಲ್ಲಿ ಮೂವರು ಪಾತ್ರಧಾರಿಗಳು ಯಕ್ಷಗಾನವನ್ನು ತಮ್ಮ ವಾಕ್ಚಾತುರ್ಯಕ್ಕೆ ಬಳಸಿಕೊಳ್ಳುವ ನಡುವೆ ತೀವ್ರವಾಗಿ ಮಾತಿನ ಚಕಮಕಿ ನಡೆದಿದೆ. “ಈ ಯಕ್ಷಗಾನ ಪ್ರಸಂಗವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರಸಂಗದಲ್ಲಿ ಅಭಿನಯಿಸಿದ ಕಲಾವಿದರು ದಾರಿ ಹೆಣವಾಗುವುದನ್ನು ತಪ್ಪಿಸಲು ಯಾರಿಂದಲೂ ಸಾದ್ಯವಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾದ ಪೆÇೀಸ್ಟುಗಳು ಹರಿದಾಡುತ್ತಿವೆ.

ಉಡುಪಿಯ ಸಾಲಿಗ್ರಾಮ ಗುರುಪ್ರಸಾದಿತ ಯಕ್ಷಗಾನ ಮಂಡಳಿ ಪ್ರದರ್ಶಿಸಿದ ಪ್ರಸಂಗ ಇದಾಗಿದ್ದು, ಎಲ್ಲಿ-ಯಾವಾಗ ಪ್ರದರ್ಶಿಸಲಾಯಿತು ಎಂಬುದು ಗೊತ್ತಾಗಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ “ಯಕ್ಷಗಾನದಲ್ಲಿ ಕೂಡ ಮುಸ್ಲಿಂ ಸಮುದಾಯದ ಬಗ್ಗೆ ಮತ್ತು ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ, ಮುಸ್ಲಿಮರಿಗೆ ಹುಟ್ಟುವ ಮಕ್ಕಳ ಬಗ್ಗೆ ಅವಮಾನಿಸಲಾಗಿದೆ. ಮುಸ್ಲಿಮರಿಗೆ ಮಕ್ಕಳು ಹುಟ್ಟುವ ವಿಷಯದಲ್ಲಿ ಅವಹೇಳನ ಮಾಡಿ ಅತೀ ಕೀಳು ಭಾಷೆ ಬಳಸಲಾಗಿದೆ.

“ಮುಸ್ಲಿಮರು ನೀವು ಎಲ್ಲಿಂದಲೋ ಬಂದವರು” ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ ಪ್ರತಿಯಾಗಿ, “ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇನ್ನೊಂದು ಧರ್ಮವನ್ನು ಅವಮಾನಿಸುತ್ತಿರುವುದು ಶೋಭೆ ತರುವಂಥದ್ದಲ್ಲ” ಎಂದಿದ್ದಾರೆ. “ಇಂತಹ ಯಕ್ಷಗಾನದ ಆಟವನ್ನು ಕೊನೆಗೊಳಿಸಿ, ಇಲ್ಲದಿದ್ದರೆ ಇಂತಹ ಪಾತ್ರಧಾರಿಗಳು ಬೀದಿಯಲ್ಲಿ ಹೆಣವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಎಲ್ಲಕ್ಕೂ ಒಂದು ಮಿತಿ ಇದೆ, ನೆನಪಿರಲಿ. ಮುಸ್ಲಿಮರು ನಿಸ್ಸಹಾಯಕತೆಯಿಂದ ಬದುಕಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

 

LEAVE A REPLY