ಉ ಪ್ರ ಸೀಎಂ ಯೋಗಿ ಮಾ 3ಕ್ಕೆ ನಮ್ಮ ಕರಾವಳಿಗೆ

ಕರಾವಳಿ ಅಲೆ ವರದಿ

ಮಂಗಳೂರು : ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ನಗರದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗತೊಡಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ, ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್ ಶೀಘ್ರವೇ ಕರಾವಳಿಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಲಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಪರಿವಾರ ಯುವಕರ ಹತ್ಯೆ ಖಂಡಿಸಿ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಕರಾವಳಿಯಲ್ಲಿ ಮಾರ್ಚ್ 3ರಿಂದ 6ರವರೆಗೆ ನಡೆಯುವ ಪಾದಯಾತ್ರೆಯಲ್ಲಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಟಿಪಳ್ಳದಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ನಿವಾಸಕ್ಕೂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

 

LEAVE A REPLY