ನೇಣು ಬಿಗಿದು ಯುವತಿ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ

ಉಡುಪಿ : ಕೆಂಜೂರು ಗ್ರಾಮದ ಕುಕ್ಕುಂಜೆಬೈಲು ನಿವಾಸಿ ನರಸಿಂಹ ನಾಯ್ಕ ಎಂಬವರ ಮಗಳು ರಾಧಿಕಾ ನಾಯ್ಕ (16) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ರಾಧಿಕಾಳು ಮಂಗಳವಾರ ಬೆಳಿಗ್ಗೆ ಮನೆಯ ಅಡುಗೆ ಕೋಣೆಯಲ್ಲಿ ಮರದ ಜಂತಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.